170 ಅಡಿಕೆ ಗಿಡ ಕಡಿದು ನಾಶ ಮಾಡಿದ ಕಿಡಿಗೇಡಿಗಳು

ಬೇಲೂರು, ಫೆ.23- ಜಮೀನಿನಲ್ಲಿ ಹುಲುಸಾಗಿ ಬೆಳೆದಿದ್ದ 170ಕ್ಕೂ ಹೆಚ್ಚಿನ ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿ, ಪೈಪ್‍ಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಶಂಭುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಸಂತೋಷ್ ಎಂಬುವವರು ಕಳೆದ ಎರಡು ವರ್ಷಗಳಿಂದ ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಆದರೆ ಸುಮಾರು 170ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡ ರೈತ ಸಂತೋಷ್ ಆತಂಕ ವ್ಯಕ್ತಪಡಿಸಿದ್ದಲ್ಲದೆ, ಕಣ್ಣೀರಿಟ್ಟು […]