2025ರ ಜೂನ್ ವೇಳೆಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ

ಬೆಂಗಳೂರು,ನ.18-ಮೆಟ್ರೋ ರೈಲು ವ್ಯವಸ್ಥೆಯು ಸುಗಮ ಸಂಚಾರವನ್ನು ಸಾಧ್ಯವಾಗಿಸುತ್ತಿದ್ದು, 2025ರ ಜೂನ್ ಹೊತ್ತಿಗೆ ನಮ್ಮ ಮೆಟ್ರೋ ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ತಿಳಿಸಿದ್ದಾರೆ. ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿಂದು ಸಂಚಾರ ವ್ಯವಸ್ಥೆಯ ಭವಿಷ್ಯ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮೆಟ್ರೋದ 2 ಮತ್ತು 3ನೇ ಹಂತದ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದರೆ, ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ ಎಂದರು. ಸದ್ಯಕ್ಕೆ ಅಂತರರಾಷ್ಟ್ರೀಯ […]