ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ, ಶೇ.17 ರಷ್ಟು ವೇತನ ಹೆಚ್ಚಳ

ಬೆಂಗಳೂರು,ಮಾ.1- ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನೌಕರರ ಕೋರಿಕೆಯಂತೆ ತತ್‍ಕ್ಷಣದಿಂದಲೇ ಜಾರಿಯಾಗುವಂತೆ ಶೇ.17ರಷ್ಟು ವೇತನವನ್ನು ಪರಿಷ್ಕರಣೆ ಮಾಡಲಾಗುವುದು. ಕೂಡಲೇ ಸರ್ಕಾರಿ ಆದೇಶ ಹೊರಡಿಸಲು ಸಂಬಂಧಪಟ್ಟ ಅಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸುದ್ದಿಗಾರರಿಗೆ ತಿಳಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮಧ್ಯಂತರ ಪರಿಹಾರ ನೀಡುವ ಕುರಿತು ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಹಣಕಾಸಿನ ಇತಿಮಿತಿಯೊಳಗೆ ನಾವು ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. […]