ಗುಜರಾತ್‍, ಮಹಾರಾಷ್ಟ್ರದ ಅನೇಕ ನಗರಗಳಲ್ಲಿ ಪ್ರವಾಹ, 18 ಸಾವು

ನವದೆಹಲಿ,ಜು.13- ಸತತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿ ಕೊಂಚ ವಿರಾಮ ಪಡೆದುಕೊಂಡಿದ್ದರೆ, ಮಹಾರಾಷ್ಟ್ರ ಮತ್ತು ಗುಜರಾತ್‍ನ ಅನೇಕ ನಗರಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿವೆ.ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಆರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಿನ್ನೆ ಅವರ ಸ್ಪೋಟ್ರ್ಸ್ ಯುಟಿಲಿಟಿ ವೆಹಿಕಲ್ (ಎಸ್‍ಯುವಿ) ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದರಿಂದ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಮೂವರು ನಿವಾಸಿಗಳು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ ಎಂದು […]