ಬಿಜೆಪಿ ನಾಯಕಿ ಸೋನಾಲಿ ಸಾವಿನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ಅರೆಸ್ಟ್

ಪಣಜಿ, ಆ.26- ಬಿಜೆಪಿ ನಾಯಕಿ ಹಾಗೂ ಬಿಗ್‍ಬಾಸ್ ಖ್ಯಾತಿಯ ಸೋನಾಲಿ ಪೊಗಾಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಸ್ನೇಹಿತರ ಜೊತೆ ಗೋವಾಕ್ಕೆ ಬಂದು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ನಂತರ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಮೊದಲು ಅವರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮತ್ತು ದೇಹದ ಮೇಲೆ ಹಲವಾರು ಕಡೆ ಬಲವಾದ ಗಾಯದ ಗುರುತುಗಳು ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸಾವಿನ […]