ಪ್ರವೀಣ್ ಹತ್ಯೆ ಪ್ರಕರಣ, ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬೆಂಗಳೂರು, ಆ.1- ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ನಗರದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಸಂಬಂಧ ಕೆಲವು ಮಾಹಿತಿ ಮೇರೆಗೆ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ವಿಶೇಷ ತಂಡವೊಂದು ನಗರದಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೂ ಒಟ್ಟು 40 ಜನರನ್ನು ವಶಕ್ಕೆ ತೆಗೆದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ […]