BIG NEWS: ನ್ಯಾಟೊ ಸದಸ್ಯ ಪೊಲೆಂಡ್ ಮೇಲೆ ರಷ್ಯಾ ಕ್ಷಿಪಣಿ ದಾಳಿ

ವಾರ್ಸಾ,ನ.16- ರಷ್ಯಾ ನಿರ್ಮಿತ ಕ್ಷಿಪಣಿಗಳು ಉಕ್ರೇನ್ ಗಡಿಯಲ್ಲಿರುವ ಪೊಲೆಂಡ್ ಹಳ್ಳಿಗಳ ಮೇಲೆ ಅಪ್ಪಳಿಸಿದ್ದು, ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಪೊಲೆಂಡ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಲುಕಾಜ್ ಜಸಿನಾ ಇದನ್ನು ದೃಢಪಡಿದ್ದಾರೆ. ಕ್ಷಿಪಣಿ ದಾಳಿಯ ಬಗ್ಗೆ ವಿವರಣೆ ನೀಡುವಂತೆ ರಷ್ಯಾದ ರಾಯಭಾರಿಗೆ ಪೊಲೆಂಡ್ ತಾಕೀತು ಮಾಡಿದೆ. ನ್ಯಾಟೊ ಸದಸ್ಯ ದೇಶವಾಗಿ ಪೊಲೆಂಡ್ ಸೇರಿದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದ್ದು ರಷ್ಯಾ ದಾಳಿಯು ಉಕ್ರೇನ ನಿಂದಾಚೆಗೆ ವಿಸ್ತರಿಸಬಹುದು ಎಂಬ ಆತಂಕ ಶುರುವಾಗಿದೆ. ಈ ನಡುವೆ ಉಕ್ರೇನ್ ಗಡಿಯಲ್ಲಿರುವ […]

ವ್ಯಾನ್ -ಟ್ಯಾಂಕರ್ ಡಿಕ್ಕಿ: ಇಬ್ಬರು ಸಾವು, 6 ಮಂದಿಗೆ ಗಾಯ

ಲಖ್ನೋ,ಆ.3- ವ್ಯಾನ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಹಫೀಜ್ ಶಶಿದ್(60), ಜಯವಟಿ(50) ಮೃತಪಟ್ಟ ದುರ್ದೈವಿಗಳು. ಸತೇಡಿ ಗಂಗಾ ಕಾಲುವೆ ಸಮೀಪ ಖೋಟಲಿ-ಬುಧಾನಾ ರಸ್ತೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್‍ನಲ್ಲಿದ್ದ ಇಬ್ಬರು ಅಸುನೀಗಿದ್ದಾರೆ. ಉಳಿದ ಆರು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ […]

ಕೆನಡಾದ ವ್ಯಾಂಕೋವರ್ ಗುಂಡಿನ ದಾಳಿ, ಇಬ್ಬರ ಸಾವು, 4 ಮಂದಿಗೆ ಗಾಯ

ಕೆನಡಾ,ಜು.26- ಕೆನಡಾದ ವ್ಯಾಂಕೋವರ್‍ನಲ್ಲಿ ಭಾರೀ ಗುಂಡಿನ ದಾಳಿ ನಡೆದಿದ್ದು , ಇಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ. ಪ್ರತಿ ದಾಳಿಯಲ್ಲಿ ಶಂಕಿತ ದಾಳಿಕೋರನೂ ಕೂಡ ಸಾವನ್ನಪ್ಪಿದ್ದಾನೆ. ಲಾಂಗ್ಲಿ ಮತ್ತು ಲಾಂಗ್ಲಿ ಟೌನ್‍ಶಿಪ್‍ನ 5 ಸ್ಥಳಗಳಲ್ಲಿ ದಾಳಿಕೋರರು ದಾಳಿ ನಡೆಸಿದ್ದು, ನಿರಾಶ್ರಿತರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಆದರೆ ಪೊಲೀಸ್ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ಪೊಲೀಸ್ ಅಧಿಕಾರಿಗಳು ಶಂಕಿತರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ. ಈ ಜನರ ನಡುವೆ ಏನಾದರೂ ಸಂಪರ್ಕವಿದೆಯೇ ಅಥವಾ ಇಲ್ಲವೇ ಎಂದು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ […]

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬಸ್, ರೈತ ಮತ್ತು ಭಿಕ್ಷುಕ ಸಾವು

ಕೊರಟಗೆರೆ, ಜ.23- ಚಾಲಕನ ಅಜಾಗರೂಕತೆಯಿಂದ ಸಾರಿಗೆ ಬಸ್ ಮರಕ್ಕೆ ಗುದ್ದಿದ ಪರಿಣಾಮ ರೈತ ಹಾಗೂ ಭಿಕ್ಷುಕ ಸಾವನ್ನಪ್ಪಿ 10 ಜನ ಗಾಯಗೊಂಡಿರುವ ಘಟನೆ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.ಭಿಕ್ಷುಕ ಸ್ಥಳದಲ್ಲೇ ಸಾವನ್ನಪ್ಪಿದರೆ ರೈತ ಗೋಪಾಲಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿರಿ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. […]