2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಅಗತ್ಯ

ಬೆಂಗಳೂರು, ಜ.4- ಕೊರೊನಾ ಲಸಿಕೆಯನ್ನು 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಮಾತ್ರವಲ್ಲ, 2 ವರ್ಷ ಮೇಲ್ಪಟ್ಟ ಮಕ್ಕಳಿಗೂ ನೀಡಬೇಕಾದ ಅಗತ್ಯವಿದೆ ಎಂದು ಹಿರಿಯ ಮಕ್ಕಳ ತಜ್ಞ ಡಾ.ಸುರೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕದಂತೆ ಮೂರನೆ ಅಲೆಯಲ್ಲಿ ಮಕ್ಕಳಿಗೇ ಹೆಚ್ಚು ಸೋಂಕು ತಗುಲುವ ಸಂಭವವಿದೆ. ಅಮೆರಿಕದಲ್ಲಿ ಈಗಾಗಲೇ 2 ರಿಂದ 15 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಅದರಂತೆ ಇಲ್ಲಿಯೂ ಕೂಡ ಲಸಿಕೆ ನೀಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಮೂರನೆ ಅಲೆ ಸಂಭವ […]