ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರು

ಬೆಳಗಾವಿ , ಡಿ.20- ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುವ ಲಕ್ಷಣಗಳು ಕಂಡುಬರುತ್ತಿದೆ. 2023ರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳಷ್ಟೆ ಬಾಕಿಯಿದ್ದು, ಹೊಸ ವರ್ಷದ ನಂತರ ಪಕ್ಷಾಂತರ ಪರ್ವ ಮುನ್ನಲೆಗೆ ಬರುವ ಸಾಧ್ಯತೆಯಿದ್ದು, ಪ್ರಮುಖ ಮೂರು ಪಕ್ಷಗಳಲ್ಲಿ ಬೇರೆ ಪಕ್ಷ ಸೇರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಮತದಾರರ ಮನವೊಲಿಸಲು ಸಾಕಷ್ಟು ಕಸರತ್ತುಗಳಲ್ಲಿ ತೊಡಗಿದೆ. ಸಂಕ್ರಾಂತಿ ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಬಿಜೆಪಿಗೆ, ಬಿಜೆಪಿ ಹಾಗೂ ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ, ಕಾಂಗ್ರೆಸ್ […]
ದೆಹಲಿ ಸಭೆ ಬಳಿಕ ರಣೋತ್ಸಾಹದಲ್ಲಿ ಕಾಂಗ್ರೆಸ್ ಕಲಿಗಳು

ಬೆಂಗಳೂರು,ಡಿ.13- ಗುಜರಾತ್ ಸೋಲು, ಹಿಮಾಚಲಪ್ರದೇಶ ಗೆಲುವಿನಿಂದ ಮಿಶ್ರ ಭಾವದಲ್ಲಿರುವ ಕಾಂಗ್ರೆಸ್, ನಿನ್ನೆ ದೆಹಲಿಯ ಸಭೆ ಬಳಿಕ ಮೈಕೊಡವಿ ನಿಂತಿದ್ದು ರಣೋತ್ಸಾಹದಿಂದ ಚುನಾವಣೆಯತ್ತ ಮುನ್ನಗ್ಗುತ್ತಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಪ್ರಭಾವಿ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಬಣ ರಾಜಕೀಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲ್ಲೇಬೇಕು. ಇದಕ್ಕಾಗಿ ನಿಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಿ. ಇಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬುದು ಮುಖ್ಯವಲ್ಲ. ಸಾಮೂಹಿಕ ನಾಯಕತ್ವ ಮತ್ತು ಒಗ್ಗಟ್ಟಿನ […]
ಪೈಪೋಟಿಗೆ ಇಳಿದ ರಾಜಕೀಯ ಪಕ್ಷಗಳು: ಪ್ರಚಾರದ ರಂಗೇರಿಸಿದ ಸಮಾವೇಶ

ಬೆಂಗಳೂರು,ಅ.12- ವಿಧಾನಸಭೆ ಚುನಾವಣೆಗೆ ಇನ್ನೂ 8 ತಿಂಗಳು ಬಾಕಿಯಿರುವಾಗಲೇ ಚುನಾವಣೆ ಪ್ರಚಾರದ ಕಾವು ಏರತೊಡಗಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪೈಪೋಟಿಗೆ ಇಳಿದವರಂತೆ ಮತದಾರರ ಸೆಳೆಯಲು ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಆಯೋಜಿಸಿ ರ್ಯಾಲಿ, ಯಾತ್ರೆ ಸಮಾವೇಶ ಗಳಂತಹ ಕಾರ್ಯಕ್ರಮಗಳಲ್ಲಿ ನಿರತವಾಗಿವೆ. ವಿಧಾನಸಭೆಗೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನವೇ ರಾಜ್ಯದಾದ್ಯಂತ ಚುನಾವಣೆ ಪ್ರಚಾರ ಪೂರ್ಣಗೊಳಿಸಿ ಪಕ್ಷದ ಪರವಾದ ಅಲೆ ನಿರ್ಮಿಸಿಕೊಳ್ಳಲು ಮೂರು ಪಕ್ಷಗಳು ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಒಂದು ಪಕ್ಷದ ಕಾರ್ಯಕ್ರಮಕ್ಕೆ ಪ್ರತಿಯಾಗಿ ಮತ್ತೊಂದು ಪಕ್ಷವು […]
ಎಸ್‍ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಗಳತ್ತ ಬಿಜೆಪಿ ಚಿತ್ತ
ಬೆಂಗಳೂರು,ಜು.16- 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಬಿಜೆಪಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಸಮುದಾಯಗಳ ಮತ ಸೆಳೆಯಲು ಕಾರ್ಯತಂತ್ರ ಹೆಣೆದಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯಗಳ ಮತಗಳನ್ನು ಕ್ರೋಢೀಕರಿಸಲು ಚಿಂತನೆ ನಡೆಸಿದ್ದು, ಮೇಲ್ವರ್ಗದ ಜನರ ಪಕ್ಷ ಎನ್ನುವ ಬಿಜೆಪಿಯ ಬಗ್ಗೆ ಇರುವ ಸಾರ್ವಜನಿಕರ ಅಭಿಪ್ರಾಯವನ್ನು ಬದಲಾಯಿಸಲು ದಲಿತರು, ಹಿಂದುಳಿದವರು, ರೈತರು ಮತ್ತು ಕಾರ್ಮಿಕ ವರ್ಗದವರಿಗೆ ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜ್ಯದ ಬೊಮ್ಮಾಯಿ […]
ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ : ಹೆಚ್‌ಡಿಕೆ
ಬೆಂಗಳೂರು, ಜ.27- ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಮನೆ ಬಾಗಿಲಿಗೆ ಈತನಕ ಹೋಗಿಲ್ಲ, ಮುಂದೆಯೂ ಹೋಗುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಪಕ್ಷದ ಮೊದಲ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬಂದಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ತಲುಪಲು ಶ್ರಮಿಸುತ್ತೇವೆ ಎಂದರು. 2023ಕ್ಕೆ ಕಾರ್ಯಕರ್ತರ ಶ್ರಮ […]