ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧ ವೈರಿಗಳು

ನವದೆಹಲಿ,ಡಿ.6- ಪ್ರತಿನಿತ್ಯ ರಾಜಕೀಯ ಕೆಸರೆರೆಚಾಟದಲ್ಲಿ ತೊಡಗುವ ರಾಜಕಾರಣಿಗಳು ಇಂದು ಎಲ್ಲ ವೈಮನಸ್ಯಗಳನ್ನು ತೊರೆದು ಒಂದೇಡೆ ಸೇರಿ ದೇಶದ ಅಭಿವೃದ್ಧಿ ಬಗ್ಗೆ ಚರ್ಚಿಸಿರುವುದು ವಿಶೇಷವಾಗಿದೆ. ನಮ್ಮ ದೇಶಕ್ಕೆ ಜಿ-20 ಅಧ್ಯಕ್ಷ ಸ್ಥಾನ ದಕ್ಕಿರುವುದರಿಂದ ಇಂತಹ ಅದ್ಬುತ ಅವಕಾಶ ಲಭಿಸಿದೆ. ಹೌದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಎಲ್ಲ ವಿಪಕ್ಷ ನಾಯಕರು ಪಾಲ್ಗೊಂಡು ತಮ್ಮ ಅಭಿಪ್ರಾಯ ಹಂಚಿಕೊಂಡರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಬಂಗಾಳ […]