ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು,ಫೆ.8- ಬಹುನಿರೀಕ್ಷಿತ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಮಾ.23ರಿಂದ 30ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಮಾ.23ರಂದು ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದ್ದು, 26ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಲನಚಿತ್ರೋತ್ಸವದ ಅಂಗವಾಗಿ ಸಂವಾದ, ಚರ್ಚೆ, ವಿಚಾರ ಸಂಕಿರಣ, ಅತ್ಯುತ್ತಮ ನಿರ್ದೇಶಕರೊಂದಿಗೆ ಸಂವಾದ, ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.ಸರ್ಧಾ ವಿಭಾಗದಲ್ಲಿ ಏಷ್ಯಾ ಚಲನಚಿತ್ರಗಳು, ಭಾರತೀಯ ಚಲನಚಿತ್ರಗಳು, ಕನ್ನಡ ಚಲನಚಿತ್ರಗಳು, ಸಮಕಾಲೀನ ವಿಶ್ವ ಸಿನಿಮಾ, ಪುನರಾವಲೋಕನ ವಿಭಾಗ, ಭಾರತೀಯ ಸಿನಿಮಾ ಪುನರಾವಲೋಕನ, […]
ಕಾಂಗ್ರೆಸ್ ಕೊಡುಗೆಗಳಿಗೆ ಟಕ್ಕರ್ ಕೊಡಲು ಕಮಲ ಪ್ರಣಾಳಿಕೆ ತಯಾರಿ

ಬೆಂಗಳೂರು,ಜ.18- ಕಾಂಗ್ರೆಸ್ ಕೆಲವೊಂದು ಜನಪ್ರಿಯ ಪ್ರಣಾಳಿಕೆ ಘೋಷಣೆಗಳನ್ನು ಮಾಡುವ ಮೂಲಕ ಮತದಾರರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿದೆ. ಇದಕ್ಕೆ ಕೌಂಟರ್ ಕೊಡಲು ಬಿಜೆಪಿಯೂ ಸಿದ್ದತೆ ನಡೆಸುತ್ತಿದೆ. 2023 ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೆಲವೊಂದು ಜನಪ್ರಿಯವಾದ ಘೋಷಣೆಗಳನ್ನು ಮಾಡುತ್ತಿದೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಒಂದು ಕಡೆಯಾದರೆ ಪ್ರತಿ ಕುಟುಂಬ ಓರ್ವ ಮಹಿಳೆಗೆ ತಿಂಗಳಿಗೆ 2000 ರೂ.ಗಳನ್ನು ಉಚಿತ ನೀಡುವ ಮತ್ತೊಂದು ಘೋಷಣೆ ಮಾಡಿದೆ. ಸಾಮಾನ್ಯವಾಗಿ ಚುನಾವಣಾ ಪ್ರಣಾಳಿಕೆಯನ್ನು ಸಾಂಪ್ರದಾಯಿಕ ರೀತಿಯಲ್ಲಿ ಒಟ್ಟಿಗೆ […]
2023 ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯ ಪಟ್ಟಿ

ಬೆಂಗಳೂರು,ಡಿ.11- ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹೈಕಮಾಂಡ್ ತಯಾರಿ ನಡೆಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದು ಮಹತ್ವದ ಸಭೆ ನಡೆಯಲಿದೆ. ಹಾಲಿ ಶಾಸಕರ ಪೈಕಿ ಮೂರ್ನಾಲ್ಕು ಮಂದಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ದೃವನಾರಾಯಣ್, ಸಲಿಂ ಅಹಮದ್ ಅವರನ್ನು ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದೆ. ಅದಕ್ಕಾಗಿ […]
2023ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಪ್ರಕಟ

ಬೆಂಗಳೂರು,ನ.21- ರಾಜ್ಯ ಸರ್ಕಾರ 2023ನೇ ಸಾಲಿನಲ್ಲಿ 19 ಸಾರ್ವತ್ರಿಕ ರಜಾದಿನ 17 ಪರಿಮಿತ ರಜಾದಿನಗಳನ್ನು ಪ್ರಕಟಿಸಿದೆ. ಜನವರಿ 26ರ ಗಣರಾಜ್ಯೋತ್ಸವ, ಫೆ.18ರ ಮಹಾಶಿವರಾತ್ರಿ, ಮಾ.22ರ ಯುಗಾದಿ ಹಬ್ಬ , ಏ.3ರ ಮಹಾವೀರ ಜಯಂತಿ, ಏ.7ರ ಶುಭ ಶುಕ್ರವಾರ, ಏ.14ರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮೇ 1ರ ಕಾರ್ಮಿಕ ದಿನಾಚರಣೆ, ಜೂ.29ರ ಬಕ್ರೀದ್, ಜುಲೈ 29ರ ಮೊಹರಂ ಕಡೆಯ ದಿನವನ್ನು ಸಾರ್ವತ್ರಿಕ ರಜಾದಿನಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆ, ಸೆ.18ರ ವರಸಿದ್ದಿ ವಿನಾಯಕ ವ್ರತ, […]
ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ

ಬೆಂಗಳೂರು,ನ.15- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿ ಫಾರಂ ಪಡೆಯುವ ಸಲುವಾಗಿ 500ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ 10 ದಿನಗಳಿಂದ ಸುಮಾರು 1100ಕ್ಕೂ ಹೆಚ್ಚು ಮಂದಿ 5 ಸಾವಿರ ರೂ. ಶುಲ್ಕ ಪಾವತಿಸಿ ಅರ್ಜಿಗಳನ್ನು ಖರೀದಿಸಿದ್ದಾರೆ. ಅವರಲ್ಲಿ 500 ಮಂದಿ ಠೇವಣಿ ಬಾಂಡ್ನೊಂದಿಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿಯ ಈ ಬಾರಿ ಸ್ಪಷ್ಟ ನಿಯಮಾವಳಿ ರಚನೆಯಾಗಿದ್ದು, ಬಿ ಫಾರಂ ಪಡೆಯಬೇಕಾದರೆ ಎಷ್ಟೇ ಪ್ರಭಾವಿ ನಾಯಕರಾಗಿದ್ದರು ಅರ್ಜಿ ಸಲ್ಲಿಕೆ ಕಡ್ಡಾಯ ಎಂಬ ಷರತ್ತು ವಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ […]
ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ: ಅತೃಪ್ತ ಶಾಸಕರು ಪಕ್ಷ ತೊರೆಯಲು ಸಿದ್ಧತೆ..
ಬೆಂಗಳೂರು,ಆ.16- ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುವ ಲಕ್ಷಣಗಳು ಕಂಡುಬರುತ್ತಿದ್ದು, 2023ರ ವಿಧಾನ ಸಭಾ ಚುನಾವಣೆಗೆ ಕೇವಲ ಎಂಟು ತಿಂಗಳಷ್ಟೆ ಬಾಕಿಯಿದೆ. ಹೀಗಾಗಿ ಡಿಸೆಂಬರ್ ತಿಂಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಮುನ್ನಲೆಗೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆ ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ಒಂದಷ್ಟು ಶಾಸಕರು, ನಾಯಕರು ಭಿನ್ನಾಭಿಪ್ರಾಯ ಹೊಂದಿದ್ದು, ತಮ್ಮ ಪಕ್ಷದ ವಿರುದ್ಧವೇ ಹರಿಹಾಯ್ದವರು ಸದ್ಯಕ್ಕೆ ಮೌನಕ್ಕೆ ಶರಣಾಗಿದ್ದಾರೆ. ಬಿಜೆಪಿಯಲ್ಲಿಯೂ ಒಂದಷ್ಟು ಆಕ್ರೋಶಿತ ನಾಯಕರಿದ್ದಾರೆ. ಆದರೆ ಇವರೆಲ್ಲರೂ ಇದೀಗ ಮೌನಕ್ಕೆ ಶರಣಾಗಿದ್ದಾರೆ. ಈಗಾಗಲೇ […]
2023ರ ಡಿಸೆಂಬರ್ ವೇಳೆಗೆ ಹಾಸನದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ…!
ಹಾಸನ, ಜು.23- ಮುಂದಿನ ವರ್ಷ 2023ರ ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ವಿಮಾನ ಹಾರಾಟ ಆರಂಭವಾಗಲಿದೆ ಎಂದು ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ತಿಳಿಸಿದರು. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೂಲಸೌಕರ್ಯ ಸಚಿವ ವಿ. ಸೋಮಣ್ಣ ಅವರು ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲಾಯ ವಿಮಾನ ನಿಲ್ದಾಣಗಳ ಕಾಮಗಾರಿ ಅಭಿವೃದ್ಧಿ […]