ಸಂಸತ್‍ನ ಅಧಿವೇಶನದಲ್ಲಿ 24 ಹೊಸ ಮಸೂದೆ ಮಂಡಿಸಲು ಸಿದ್ಧತೆ

ನವದೆಹಲಿ,ಜು.16- ಸೋಮವಾರದಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಸಂಸತ್‍ನ ಮುಂಗಾರು ಅಧಿವೇಶನದಲ್ಲಿ ಈ ಬಾರಿ ಆಡಳಿತಾರೂಢ ಬಿಜೆಪಿ ಸರ್ಕಾರ 24 ಹೊಸ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ. ಲೋಕಸಭೆ ಮತ್ತು ರಾಜ್ಯಸಭಾ ಸೆಕ್ರೆಟರಿಯೇಟ್ ನೀಡಿದ ಮಾಹಿತಿಯ ಪ್ರಕಾರ, ಇವುಗಳಲ್ಲಿ ಬಹು ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2022, ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳು (ತಿದ್ದುಪಡಿ) ಮಸೂದೆ, ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ ಮತ್ತು ಪತ್ರಿಕಾ ಮತ್ತು ನೋಂದಣಿ ಸೇರಿದಂತೆ ಮಹತ್ವದ ಮಸೂದೆಗಳು ಈ ಅಧಿವೇಶನದಲ್ಲಿ ಮಂಡನೆಯಾಗಲಿದೆ. […]