ಮಳೆ ಹಾನಿ ಪರಿಹಾರಕ್ಕೆ 250 ಕೋಟಿ ರೂ. ಬಿಡುಗಡೆ

ಬೆಂಗಳೂರು,ಆ.30- ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ವರುಣನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಎಲ್ಲವನ್ನೂ ತೆಗೆದುಕೊಂಡಿದ್ದೇವೆ ಎಂದರು. ಕಳೆದ 24 ಗಂಟೆಗಳ ಅವಯಲ್ಲಿ 890 ಮಿಲಿಮೀಟರ್ ಮಳೆಯಾಗಿದ್ದು, […]