ಹರ್ಷ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ, 10 ಮಂದಿ ವಶಕ್ಕೆ , ತನಿಖೆ ಚುರುಕು
ಬೆಂಗಳೂರು, ಫೆ.22- ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸರು ಇನ್ನೂ 10 ಮಂದಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಿರುವ ನಾಲ್ಕು ತನಿಖಾ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿವೆ. ಒಂದು ತಂಡ ಬೆಂಗಳೂರಿನಲ್ಲಿ, ಮೂರು ತಂಡಗಳು ವಿವಿಧ ಜಿಲ್ಲೆಗಳಲ್ಲಿ ತನಿಖೆ ನಡೆಸಿ 10 ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಇವರಲ್ಲಿ ಮತ್ತೆ ಮೂವರನ್ನು ಬಂಸುವ ಸಾಧ್ಯತೆ ಇದೆ. […]