ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ಚಿಕ್ಕಬಳ್ಳಾಪುರ,ಫೆ.28- ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.ಆಂಧ್ರಪ್ರದೇಶದ ಕದಿರಿ ಗ್ರಾಮದ ಗೌಸ್, ಅಮ್ಮಜಾನ್ ಮೃತಪಟ್ಟ ದುರ್ದೈವಿಗಳು. ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ 7ರ ಹೊನ್ನೇನಹಳ್ಳಿ ಗೇಟ್ ಬಳಿಯ ಹೋಟೆಲ್‍ನಲ್ಲಿ ತಿಂಡಿ ತಿಂದು ಮೂವರು ಆ್ಯಕ್ಟಿವಾದಲ್ಲಿ ರಸ್ತೆ ತಿರುವು ಪಡೆಯಬೇಕಾದರೆ ಬಾಗೇಪಲ್ಲಿ ಕಡೆಯಿಂದ ಚಿಕ್ಕಬಳ್ಳಾಪುರ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಚಕ್ರದಡಿ […]