ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕದಿಯುತ್ತಿದ್ದ ಇಬ್ಬರ ಬಂಧನ

ಬೆಂಗಳೂರು, ನ.26- ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ 3 ಲಕ್ಷ ರೂ. ಬೆಲೆಬಾಳುವ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಗಿರಿನಗರದ ವೀರಭದ್ರ ನಿವಾಸಿ ಸಂಜಯ್(24) ಮತ್ತು ಶೇಖರ್ ಅಲಿಯಾಸ್ ತಿಪ್ಪೆ (27) ಬಂಧಿತ ಆರೋಪಿಗಳು.ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣಗಳಲ್ಲಿ ಆರೋಪಿ ಮತ್ತು ವಾಹನ ಪತ್ತೆಗಾಗಿ ನೇಮಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ 7 ಪ್ರಕರಣಗಳನ್ನು […]