ವಿದ್ಯಾರ್ಥಿನಿ ಸಾವು ಪ್ರಕರಣ : ಇಬ್ಬರು ಶಿಕ್ಷಕರು, 300 ಪ್ರತಿಭಟನೆಕಾರರ ಬಂಧನ

ಕಲ್ಲಕುರಿಚಿ. ಜು.18- ಓದಿನಲ್ಲಿ ಹಿಂದೆಬಿದ್ದಿದೀಯ ಎಂದು ಚಿತ್ರಹಿಂಸೆ ನೀಡಿ ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವಸತಿ ಶಾಲೆಯೊಂದರ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಅಲ್ಲದೆ, ಘಟನೆ ಖಂಡಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ಶಾಲೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸುಮಾರು 300 ಜನರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚಿನ್ನಸೇಲಂನ ಕಣಿಯಮೂರ್ ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 12 ನೇ ತರಗತಿ ಓದುತ್ತಿದ್ದ 17 ವರ್ಷದ ಬಾಲಕಿ ಜುಲೈ 13 ರಂದು ಹಾಸ್ಟೆಲ್ ಆವರಣದಲ್ಲಿ ಅನುಮಾನ […]