ಅಮೆರಿಕದಲ್ಲಿ ತೀವ್ರ ಹಿಮ ಮತ್ತು ಚಳಿಗೆ 34 ಮಂದಿ ಸಾವು

ನ್ಯೂಯಾರ್ಕ,ಡಿ.26-ಪೂರ್ವ ಅಮೆರಿಕದ ಕೆಲವು ಭಾಗಗಳಲ್ಲಿ ತೀವ್ರವಾದ ಹಿಮ ಮತ್ತು ಚಳಿಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಚಳಿಗಾಲದ ಚಂಡಮಾರುತದ ಆರ್ಭಟಕ್ಕೆ ಅಮೆರಿಕ ತತ್ತರಿಸಿದ್ದು, ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತಹ ಸ್ಥಿತಿ ಉಂಟಾಗಿದೆ. ಪ್ರಮುಖವಾಗಿ ನ್ಯೂಯಾರ್ಕ್ ಬಫಲೋ ಚಂಡಮಾರುತದ ದಾಳಿಗೆ ತುತ್ತಾಗಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆಗೂ ಕೂಡ ತಡೆಯುಂಟುಮಾಡಿದೆ. ಹಿಮಪಾತದಿಂದ ನ್ಯೂಯಾರ್ಕನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಜನ ಸಂಪರ್ಕ ಕಡಿತ, ವಿದ್ಯುತ್ ಅಭಾವ ಮತ್ತು ತಾಪಮಾನ ಕುಸಿತದಿಂದ ಅಮೆರಿಕದ […]