11 ಆರೋಪಿಗಳ ಸೆರೆ : 4.33 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು, ಮಾ. 15- ಕೇಂದ್ರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಿ 23 ಪ್ರಕರಣ ಗಳನ್ನು ಪತ್ತೆ ಹಚ್ಚಿ 4.33 ಕೋಟಿ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹಲಸೂರು ಗೇಟ್: ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಹಾಗೂ ಈತನಿಂದ ಕಳವು ಮಾಲನ್ನುಸ್ವೀಕರಿಸಿದ್ದ ಮತ್ತೊಬ್ಬನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ 70 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಚಿನ್ನದ ಗಟ್ಟಿ, ನಾಲ್ಕು ವಾಚ್‍ಗಳು, 100 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. […]