40% ಕಮಿಷನ್ ವಿರುದ್ಧ ಹೋರಾಟಕ್ಕೆ ಪ್ರತಿಪಕ್ಷಗಳ ಹಿಂಜರಿಕೆ
ಬೆಂಗಳೂರು,ಆ.26- ಸರ್ಕಾರಿ ಕಾಮಗಾರಿ ಗಳಲ್ಲಿ ಶೇ.40ರಷ್ಟು ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಗುತ್ತಿಗೆದಾರರ ಸಂಘದ ಅರೋಪವನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಪ್ರತಿಪಕ್ಷಗಳಿಗೆ ಅಳುಕು ಆರಂಭವಾಗಿದೆ. ಮೇಲ್ನೋಟಕ್ಕೆ ಭ್ರಷ್ಟಾಚಾರದ ವಿರುದ್ಧ ರಣಕಹಳೆ ಯಂತೆ ಕಂಡುಬರುವ ಎಲ್ಲಾ ಪಕ್ಷಗಳು ಒಳಗೊಳಗೆ ಹಿಂಜರಿಕೆಯಿಂದ ಬಳಲುತ್ತಿದ್ದಾರೆ. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಶೇ.40ರಷ್ಟು ಕಮೀಷನ್ ಪಡೆಯಲಾಗುತ್ತಿದೆ ಎಂದು ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈ ಹಿಂದೆ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಭ್ರಷ್ಟಾಚಾರ ನಡೆಸಿವೆ, ಕಮೀಷನ್ ಪಡೆದಿವೆ ಎಂಬ ಆರೋಪವನ್ನು ಮಾಡಿದ್ದಾರೆ. ಯಾರೂ […]
40% ಸೂತ್ರಧಾರರ ಪಾತ್ರ ಸದ್ಯದಲ್ಲೇ ಬಯಲಾಗಲಿದೆ : ಸಿ.ಟಿ.ರವಿ
ಬೆಂಗಳೂರು,ಆ.25- ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿರುವ ಹಿಂದೆ ನಿರ್ದೇಶಕರು, ನಿರ್ಮಾಪಕರು ಹಾಗೂ ಸೂತ್ರದಾರಿಗಳು ಯಾರ್ಯಾರಿದ್ದಾರೋ ಎಲ್ಲವೂ ಕೂಡ ಸದ್ಯದಲ್ಲೇ ಹೊರಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಕಪ್ಪುಚುಕ್ಕೆ ತರಬೇಕೆಂಬ ದುರದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಇದರ ಹಿಂದಿನ ಸೂತ್ರಧಾರರ ಹೆಸರುಗಳು ಕೂಡ ಸದ್ಯದಲ್ಲೇ ಗೊತ್ತಾಗಲಿದೆ ಎಂದು ತಿಳಿಸಿದರು. ಗುತ್ತಿಗೆಯಲ್ಲಿ 40% ಕಮೀಷನ್ ಅವ್ಯವಹಾರ ನಡೆದಿದ್ದರೆ ಅಥವಾ ಯಾವುದಾದರೂ ಸಚಿವರು, ಶಾಸಕರು ಇಂತಿಷ್ಟೇ ಕಮೀಷನ್ […]
40% ಕಮೀಷನ್ ಆರೋಪ ಮತ್ತೆ ಪ್ರಧಾನಿಗೆ ಪತ್ರ
ಬೆಂಗಳೂರು,ಆ.22- ಆಡಳಿತಾರೂಢ ಬಿಜೆಪಿಗೆ ತೀವ್ರ ಮುಜುಗರ ಸೃಷ್ಟಿಸಿದ್ದ ಗುತ್ತಿಗೆದಾರರ ಬಿಲ್ ಪಾವತಿಗೆ ಶೇ.40 ಕಮೀಷನ್ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ವಿವಿಧ ಇಲಾಖೆಗಳಲ್ಲಿ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಬಿಲ್‍ಗಳು ಪಾವತಿಯಾಗಲು ಜನಪ್ರತಿನಿಧಿಗಳಿಗೆ ಶೇ.40 ಕಮೀಷನ್ ನೀಡಬೇಕು. ಕೂಡಲೇ ಪ್ರಧಾನಿ ನರೇಂದ್ರಮೋದಿ ಅವರು ಮಧ್ಯಪ್ರವೇಶಿಸಿ ಕ್ರಮ ವಹಿಸಬೇಕೆಂದು ರಾಜ್ಯ ಗುತ್ತಿಗೆದಾರರ ಸಂಘ ಕಳೆದ ವರ್ಷ ಪತ್ರ ಬರೆಯಲಾಗಿತ್ತು. ಈ ಹೀಗೆ ಪತ್ರ ಬರೆದು ಹಲವು ತಿಂಗಳಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇದೀಗ ಗುತ್ತಿಗೆದಾರರ ಸಂಘ ಪುನಃ ಮತ್ತೊಮ್ಮೆ […]