ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಗೆ 150 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು, ಫೆ. 23- ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ನಾಲ್ಕನೆ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 150,28,50,000ರೂ.ಗಳನ್ನು ಬಿಡುಗಡೆ ಮಾಡಿದೆ. ವಿಧಾನಸಭೆಯ 225 ಸದಸ್ಯರು ಹಾಗೂ ವಿಧಾನ ಪರಿಷತ್‍ನ 75 ಸದಸ್ಯರಿಗೆ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮೊದಲ ಮೂರು ಕಂತಿನಲ್ಲಿ ತಲಾ 50,09,500ರೂ.ನಂತೆ ಒಟ್ಟು 450,85,50,000ರೂ.ಗಳನ್ನು ಬಿಡುಗಡೆ ಮಾಡಿತ್ತು. ಈಗ ನಾಲ್ಕನೆ ಕಂತಿನ ಅನುದಾನವನ್ನು ಬಿಡುಗಡೆ ಮಾಡಿದ್ದು, ಪ್ರತಿ ತಿಂಗಳು ಆರ್ಥಿಕ […]