ರಾಜ್ಯದಲ್ಲಿ ನಿರಂತರ ಮಳೆಯಿಂದ ಕಂಗಾಲಾದ ರೈತರು

ಬೆಂಗಳೂರು, ಸೆ.1- ರಾಜ್ಯದಲ್ಲಿ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ತಗ್ಗಿದ್ದರೂ ಮಳೆ ಮಾತ್ರ ನಿಂತಿಲ್ಲ. ನಿನ್ನೆ ಕೂಡ ರಾಜ್ಯದ ಕೆಲೆವೆಡೆ ಭಾರೀ ಮಳೆಯಾಗಿದೆ. ಭಟ್ಕಳದಲ್ಲಿ 168.5 ಮಿ.ಮೀ ಭಾರೀ ಮಳೆಯಾದ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಹೆಚ್ಚಿನ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೋಲಾರ, ಹೊಸಕೋಟೆ, ದೊಡ್ಡಬಳ್ಳಾಪುರದಲ್ಲೂ […]