ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಐವರ ಸಾವು

ಆಲಪ್ಪುಳ (ಕೇರಳ), ಜ. 23-ಕಾರು ಮತ್ತು ಟ್ರಕ್ ನಡುವೆ ಮುಂಜಾನೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ಮುಂಜಾನೆ 1.30 ರ ಸುಮಾರಿಗೆ ಅಂಬಲಪುಳದ ಬಳಿ ಈ ದುರ್ಘಟನೆ ಸಂಭವಿಸಿದ್ದು ಐವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟಿರುವ ಐವರೂ ತಿರುವನಂತಪುರಂನಲ್ಲಿರುವ ಇಸ್ರೋ ಕ್ಯಾಂಟೀನ್‍ನಲ್ಲಿ ಗುತ್ತಿಗೆ ನೌಕರರಾಗಿದ್ದು, ಮದುವೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.ಅಮಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು […]