ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು..!

ಮಂಡ್ಯ, ಫೆ.6- ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಕೆಆರ್‍ಎಸ್‍ನ ಬಜಾರ್ ಲೈನ್‍ನಲ್ಲಿ ನಡೆದಿದೆ.ಗುಜರಾತ್ ಮೂಲದ ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಕೊಲೆಯಾಗಿದ್ದಾರೆ. ಬಜಾರ್ ಲೈನ್‍ನಲ್ಲಿ ವಾಸವಿದ್ದ ಈ ಕುಟುಂಬದವರ ಮನೆಗೆ ನಿನ್ನೆ ತಡ ರಾತ್ರಿ ನುಗ್ಗಿರುವ ದುಷ್ಕರ್ಮಿಗಳು, ಐವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವ್ಯಾಪಾರಿ ಸಮುದಾಯವಾದ ಬೈಯಾದ್ ಜನಾಂಗಕ್ಕೆ ಸೇರಿರುವ ಗಂಗರಾಮ್ […]