ಶೀಘ್ರದಲ್ಲೇ 5 ಸಾವಿರ ಕಾನ್ಸ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು,ಆ.4- ಗೃಹ ಇಲಾಖೆಯನ್ನು ಬಲಪಡಿಸುವ ಸದುದ್ದೇಶದಿಂದ ಶೀಘ್ರದಲ್ಲೇ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಮತ್ತೆ 5 ಸಾವಿರ ಕಾನ್ಸ್ ಸ್ಟೆಬಲ್ ಹುದ್ದೆ ನೇಮಕಾತಿ ಮಾಡಿಕೊಳ್ಳುತ್ತೇವೆ. 545 ಹುದ್ದೆ ಬಿಟ್ಟು 450 ಪಿಎಸ್‍ಐ ಗಳ ನೇಮಕಾತಿ ಹೊಸದಾಗಿ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ನಮ್ಮ ಅವಧಿಯಲ್ಲಿ ಹೇಗೆ ಪರೀಕ್ಷೆ ಮಾಡೋದು ಎಂಬುದನ್ನು ತೋರಿಸಿಕೊಡುತ್ತೇವೆ ಎಂದರು. ಅಭ್ಯರ್ಥಿಗಳು ವಯಸ್ಸಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. […]