ರಾಜ್ಯ ಸರ್ಕಾರದಿಂದ 500 ಕೋಟಿ ರೂ. ಅತಿವೃಷ್ಠಿ ಪರಿಹಾರ ಬಿಡುಗಡೆ

ಹಾಸನ,ಆ.5- ರಾಜ್ಯಾದ್ಯಾಂತ ನಿರಂತರವಾಗಿ ಸುರಿಯುತ್ತಿರುವ ಮಳೆ ಜನ ಜೀವನ ಅಸ್ತವ್ಯಸ್ತಗೊಳಿಸಿದ್ದು, ಅತಿವೃಷ್ಠಿ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 500 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರೊಂದಿಗೆ ಶ್ರವಣಬೆಳಗೊಳದಲ್ಲಿ ಮಳೆಯಿಂದ ಹಾನಿಗೀಡಾಗಿರುವ ವಿಂದ್ಯಗಿರಿ ಬೆಟ್ಟ, ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಕೋಪ ನಿರ್ವಹಣೆಗೆ ಹಣದ ಕೊರತೆ ಎಲ್ಲೂ ಬಾರದಂತೆ ನೋಡಿಕೊಂಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಹೊಸ ನೀತಿ ಜಾರಿಗೆ ತಂದು, […]