58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕ

ರೆವಾ,ಫೆ.5- ಮೊಬೈಲ್ ಕಳ್ಳತನದ ಆರೋಪ ಹೊರಿಸಿದ್ದ ಕಾರಣಕ್ಕೆ 16 ವರ್ಷದ ಬಾಲಕನೊಬ್ಬ, ತನ್ನ ನೆರೆ ಮನೆಯ 58 ವರ್ಷದ ಮಹಿಳೆ ಮೇಲೆ ವಿಕೃತವಾಗಿ ಅತ್ಯಾಚಾರ ನಡೆಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಕೃತ್ಯವೆಸಗಿದ್ದಾಗಿ ಒಪ್ಪಿಕೊಂಡಿರುವ ಬಾಲಕನ ಮನಸ್ಥಿತಿ ಕಂಡು ಪೊಲೀಸರೆ ಬೆಚ್ಚಿ ಬಿದ್ದಿದ್ದಾರೆ. ರೇವಾ ಜಿಲ್ಲೆಯ ಹನುಮಾನ್ ಪೊಲೀಸ್ ಠಾಣೆಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರಂದು ಕೃತ್ಯ ನಡೆದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಭೀಕರವಾಗಿ ಕೊಲೆಯಾದ ಮಹಿಳೆಯೊಬ್ಬರ ಶವ […]