ಭಿಕ್ಷಾಟನೆಯಲ್ಲಿ ತೊಡಗಿದ್ದ 55 ಮಂದಿ ರಕ್ಷಣೆ

ಬೆಂಗಳೂರು,ಫೆ.23- ನಗರದ ಪ್ರಮುಖ ಸ್ಥಳಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ಒಟ್ಟು 55 ಮಂದಿಯನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ 14 ತಂಡಗಳು ರಕ್ಷಣೆ ಮಾಡಿವೆ. ನಗರದಲ್ಲಿ ಭಿಕ್ಷಾಟನೆ ತಡೆಗಟ್ಟುವ ನಿಟ್ಟಿನಲ್ಲಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡಿಸಿಪಿಒ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ನೋಡಲ್ ಸಂಸ್ಥೆಗಳು, ಮಕ್ಕಳ ಪಾಲನಾ ಸಂಸ್ಥೆಗಳು, ಚೈಲ್ಡ್‍ಲೈನ್ ತಂಡ, ಆಫ್ಸಾ ಚೈಲ್ಡ್‍ಲೈನ್ […]