ಸರ್ಕಾರ ಮತ್ತು ರೋಗಿಗಳಿಂದ ಹಣ ಪಡೆದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು, ಆ.21- ಕೋವಿಡ್ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರ್ಕಾರದಿಂದಲೂ ಹಣ ಪಡೆದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ವಹಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, 577 ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ 403 ರೋಗಿಗಳ ಕುಟುಂಬಗಳಿಗೆ 1,58,22,359 ರೂ.ಗಳನ್ನು ಹಿಂದಿರುಗಿಸಿ, ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್ ರೋಗಿಗಳಿಂದಲೂ ಶುಲ್ಕ ವಸೂಲಿ […]