ಇನ್ನೂ ಒಂದು ವಾರ ಭಾರೀ ಮಳೆ..!

ಬೆಂಗಳೂರು,ಅ.16- ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಕೊಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೆಚ್ಚು ಕಡಿಮೆ ಇನ್ನು ಒಂದು ವಾರ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ರಾಮನಗರ, ಮಂಡ್ಯ, ಬೆಂಗಳೂರುನಗರ, ಚಿತ್ರದುರ್ಗ, ಮೈಸೂರು, ದಕ್ಷಿಣ ಕನ್ನಡ, ವಿಜಯಪುರ, ಚಾಮರಾಜನಗರ, ಬೆಳಗಾವಿ ಜಿಲ್ಲೆಗಳ ಹಲವು ಭಾಗಗಳಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾದ ವರದಿಯಾಗಿದೆ.ಉಳಿದಂತೆ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿರುವ ವರದಿಯಾಗಿದೆ. ಮೇಲ್ಮೈ ಸುಳಿ […]