5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು,ಡಿ.13- ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು,ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ […]