ಎಸ್‍ಟಿ ಸಮುದಾಯದವರ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

ಮೈಸೂರು ,ಜ. 17- ಪಾನಿಪುರಿ ತಿನ್ನಲು ತಮ್ಮ ಕೇರಿಗೆ ಬಂದರೆಂಬ ಕಾರಣಕ್ಕಾಗಿ ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಗ್ರಾಮದ ಮೂರ್ತಿ, ಸಚ್ಚಿನ್, ನವೀನ್, ಮಹದೇವಸ್ವಾಮಿ, ಚಂದನ್ ಮತ್ತು ಸಂತೋಷ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಜಯಪುರ ಹೋಬಳಿಯ ಅರಸನಕೆರೆಯಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ ಜಯಪುರ ಠಾಣೆಯಲ್ಲಿ ಜಾತಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದನೆ, ಕೊಲೆ ಬೆದರಿಕೆ ಪ್ರಕರಣ […]