ಹರಿಯಾಣ : ಬಸ್‍ಗೆ ಟ್ರಕ್ ಅಪ್ಪಳಿಸಿದ 7 ಮಂದಿ ಸಾವು

ಅಂಬಾಲಾ, ಮಾ.4-ಹರಿಯಾಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ, ಇತರ ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಹರಿಯಾಣದ ಅಂಬಾಲಾದ ಯಮುನಾ ನಗರ-ಪಂಚಕುಲ ಹೆದ್ದಾರಿಯಲ್ಲಿ ಟ್ರೇಲರ್ ಟ್ರಕ್ ಹಿಂಬದಿಯಿಂದ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಶಹಜಾದ್‍ಪುರ ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕ ನಿದ್ದೆ ಮಂಪರಿನಲ್ಲಿ ಚಲಿಸುತ್ತಿದ್ದ ಬಸ್‍ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು […]