ಬೆಂಗಳೂರಲ್ಲಿ ಇದುವರೆಗೂ 738 ಪೊಲೀಸ್ ಸಿಬ್ಬಂದಿಗೆ ಕೊರೊನಾ

ಬೆಂಗಳೂರು, ಜ.17- ನಗರದಲ್ಲಿ ಇದುವರೆಗೂ 738 ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂಥ್ ಅವರು ಸೂಚಿಸಿದ್ದಾರೆ. ಪೊಲೀಸ್ ಠಾಣೆಯ ಹೊರಗೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಕೋವಿಡ್ ಪರೀಕ್ಷೆ ಹೆಚ್ಚಳ ಮಾಡುವಂತೆಯೂ ಅವರು ಸಲಹೆ ನೀಡಿದ್ದಾರೆ. ಆಯಾ ಠಾಣೆಗಳಲ್ಲಿ ಮಹಿಳಾ ಸಿಬ್ಬಂದಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಕೆಲಸಕ್ಕೆ ಬಾರದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಅವರು ತಿಳಿಸಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಸಿಬ್ಬಂದಿಗಳ ಆರೋಗ್ಯದ ಬಗ್ಗೆ […]