ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚನೆ : ಸಿಎಂ ಭರವಸೆ
ಬೆಂಗಳೂರು, ಫೆ.17- ಮುಂಬರುವ ಬಜೆಟ್‍ನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಏಳನೆ ವೇತನ ಆಯೋಗ ರಚನೆ ಮಾಡುವ ಸಾಧ್ಯತೆಯ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಯವರು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಡುವೆ ವೇತನ ತಾರತಮ್ಯ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರ ಐದಾರು ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚನೆ ಮಾಡಿ ವೇತನ ಪರಿಷ್ಕರಣೆ ಮಾಡುತ್ತಿದೆ. […]