7ನೇ ವೇತನ ಆಯೋಗಕ್ಕೆ ಸಲಹೆ ಸ್ವೀಕಾರ

ಬೆಂಗಳೂರು,ಫೆ.5- ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆಗೆ ರಚಿಸಲಾಗಿರುವ ಏಳನೇ ರಾಜ್ಯ ವೇತನ ಆಯೋಗಕ್ಕೆ ವಿವಿಧ ಸಂಘ-ಸಂಸ್ಥೆಗಳು, ಇಲಾಖೆಗಳು ನೀಡಬಹುದಾದ ಸಲಹೆಯನ್ನು ಫೆ.10ರೊಳಗೆಸಲ್ಲಿಸಬಹುದು. ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾ ಅಂಶಗಳಿಗೆ ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯುವ ಉದ್ದೇಶದಿಂದ ವಿವಿಧ ಪ್ರಶ್ನಾವಳಿಗಳನ್ನು ಜ.17ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಪ್ರಶ್ನಾವಳಿಗಳು ಆಯೋಗದ ವೆಬ್‍ಸೈಟ್ 7spc.karnataka.gov.in ನಲ್ಲಿ ಲಭ್ಯವಿದ್ದು, ಪ್ರಶ್ನಾವಳಿಗಳಿಗೆ ಉತ್ತರ ಹಾಗೂ ಸಲಹೆಗಳನ್ನು ಫೆ.10ರೊಳಗೆ […]

7ನೇ ವೇತನ ಆಯೋಗ ರಚನೆ, ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ

ಬೆಂಗಳೂರು,ನ.9- ವಿಧಾನಸಭೆ ಚುನಾವಣೆ ಸಮೀಪ ಇರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ 7ನೇ ವೇತನ ಆಯೋಗ ರಚನೆ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ. ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಣೆ ಮಾಡುವ ಕುರಿತು 7ನೇ ವೇತನ ಆಯೋಗ ರಚನೆ ಮಾಡಲಾಗಿದೆ. ದಾವಣಗೆರೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು […]