ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಮತ್ತೆ PFI ಮುಖಂಡರ ಮೇಲೆ NIA ದಾಳಿ

ನವದೆಹಲಿ,ಸೆ.27- ದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಹಾಗೂ ಭಯೋತ್ಪಾದಕ ಸಂಘಟನೆಗಳಿಗೆ ಕುಮ್ಮಕು ನೀಡಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 8ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‍ಐಎ ತನಿಖಾ ತಂಡ ಮತ್ತೆ ಪಿಎಫ್‍ಐ ಮುಖಂಡರ ಮೇಲೆ ದಾಳಿ ನಡೆಸಿ ಹಲವರನ್ನು ಬಂಧಿಸಿದೆ. ಕರ್ನಾಟಕದಲ್ಲೇ ಅತಿದೊಡ್ಡ ದಾಳಿ ನಡೆದಿದ್ದು, ಸರಿಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಪಿಎಫ್‍ಐ ಮತ್ತು ಎಸ್‍ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್, ಅಸ್ಸಾಂ, ದೆಹಲಿ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಮತ್ತಿತರ ಕಡೆ ಎನ್‍ಐಎ , […]