ಕಾರ್ಖಾನೆಯಲ್ಲಿ ಸ್ಫೋಟ, ಒಂಬತ್ತು ಕಾರ್ಮಿಕರಿಗೆ ಗಾಯ
ಭಾವನಗರ, ಫೆ.13 – ಗುಜರಾತ್‍ನ ಭಾವನಗರ ಜಿಲ್ಲಾಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಕಾರ್ಮಿಕರು ಗಾಯಗೊಂಡಿದ್ದಾರೆ. ರಾಜ್ಯದ ರಾಜಧಾನಿ ಗಾಂಧಿನಗರದಿಂದ ಸುಮಾರು 200 ಕಿಮೀ ದೂರದಲ್ಲಿರುವ ಸಿಹೋರ್ ಪಟ್ಟಣದ ಸಮೀಪದಲ್ಲಿರುವ ಅರಿಹಂತ್ ಫರ್ನೇಸ್ ರೋಲಿಂಗ್ ಮಿಲ್‍ನಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಸಿಹೋರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದಾಗ ಕಾರ್ಮಿಕರು ಕಾರ್ಖಾನೆಯಲ್ಲಿದ್ದರು. ಅವರಲ್ಲಿ ಒಂಬತ್ತು ಮಂದಿ ಸುಟ್ಟ ಗಾಯವಾಗಿದ್ದು ಅವರೆಲ್ಲರನ್ನೂ ಭಾವನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ […]