ಆದಿತ್ಯ ಠಾಕ್ರೆ ಕಾರಿನ ಮೇಲೆ ಕಲ್ಲು ತೂರಾಟ

ಔರಂಗಾಬಾದ್,ಫೆ.8- ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಶಿವಸಂವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದನ್ನು ಶಿವಸೇನೆ ಮುಖಂಡ ಅಂಬಾದಾಸ್ ಧಾನ್ವೆ ಖಚಿತಪಡಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪತ್ನಿ ರಮಾಬಾಯಿ ಅಂಬೇಡ್ಕರ್ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ಮೆರವಣಿಗೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. […]