ರಸ್ತೆ ಗುಂಡಿಗೆ ಶಿಕ್ಷಕಿ ಬಲಿ : ಎಎಪಿಯಿಂದ ಪ್ರತಿಭಟನೆ, ಮುಖಂಡರ ಬಂಧನ
ಬೆಂಗಳೂರು, ಜ.31- ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿದ್ದ ಗುಂಡಿಯಿಂದ ಸಂಭವಿಸಿದ ಅಪಘಾತದಲ್ಲಿ ಶಿಕ್ಷಕಿ ಶರ್ಮಿಳಾ ರವರು ಮೃತಪಟ್ಟಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ಬೃಹತ್ ಪ್ರತಿಭಟನೆ ನಡೆಸಿ, ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಅಪಘಾತ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ರಸ್ತೆಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ನಾವೆಲ್ಲ ಸುಮ್ಮನಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ರಾಜ್ಯ ಸರ್ಕಾರ, ಸ್ಥಳೀಯ ಶಾಸಕರು, ಬಿಬಿಎಂಪಿ, ಬಿಡಬ್ಲ್ಯುಎಸ್‍ಎಸ್‍ಬಿ ಅಪಘಾತದ ಜವಾಬ್ದಾರಿ ಹೊರಬೇಕು […]