ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಫಿಂಚ್ ವಿದಾಯ

ಪರ್ತ್,ಫೆ.7- ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮುಂಚೂಣಿ ಆಟಗಾರ ಆ್ಯರೋನ್ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಇಂದು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಆಸ್ಟ್ರೇಲಿಯಾ ಟಿ-20 ತಂಡದ ನಾಯಕರಾಗಿದ್ದ ಫಿಂಚ್ ಇಂದು ಬೆಳಿಗ್ಗೆ ನಿವೃತ್ತಿ ಘೋಷಿಸಿ ಕ್ರಿಕೆಟ್ ಪ್ರಿಯರಿಗೆ ಶಾಕ್ ನೀಡಿದ್ದಾರೆ. ಈ ಮೂಲಕ ತಮ್ಮ 12 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನ ಅಂತ್ಯಗೊಳಿಸಿದ್ದಾರೆ. ಮುಂದಿನ 2024ರ ಟಿ 20 ವಿಶ್ವಕಪ್ ವರೆಗೆ ನಾನು ಆಡುವುದು ಅನುಮಾನ. ಹೀಗಾಗಿ ಟಿ20 ನಾಯಕತ್ವದಿಂದ ಕೆಳಗಿಳಿಯಲು ಇದು ಸರಿಯಾದ ಸಮಯ. […]