ಮುಜರಾಯಿ ದೇವಸ್ಥಾನಗಳ ಸ್ವಚ್ಛ ಮಂದಿರ ಅಭಿಯಾನ

ಬೆಂಗಳೂರು,ಫೆ.4- ಭಕ್ತಾದಿಗಳಿಗೆ ದೇವಾಲಯಗಳಲ್ಲಿ ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ ಉದ್ಘಾಟನೆಗೆ ಸಿದ್ದವಾಗಿದೆ. ಮುಜರಾಯಿ, ಹಜ್ ಮತ್ತು ವಕ್ ಸಚಿವರಾದ ಶಶಿಕಲಾ ಅ ಜೊಲ್ಲೇ ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ […]

ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಚಾಲನೆ

ಬೆಂಗಳೂರು, ಜ.21- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ- ಗತಾಯ ಮತ್ತೆ ಅಧಿಕಾರಕ್ಕೆ ಬರಲೇಬೇಕೆಂದು ಪಣ ತೊಟ್ಟಿರುವ ಆಡಳಿತಾರೂಢ ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ವಿಜಯ ಸಂಕಲ್ಪ ಅಭಿಯಾನಕ್ಕೆ ರಾಜ್ಯಾದ್ಯಾಂತ ಇಂದು ಚಾಲನೆ ನೀಡಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜಾಪುರದ ನಾಗಠಾಣಾದಲ್ಲಿ ಚಾಲನೆ ಕೊಟ್ಟರೆ, ಸಿಂಧಗಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ದಾವಣಗೆರೆಯಲ್ಲಿ ಕೇಂದ್ರ […]

ದತ್ತಮಾಲಾ ಅಭಿಯಾನಕ್ಕೆ ಇಂದು ತೆರೆ

ಚಿಕ್ಕಮಗಳೂರು, ನ.13- ಶ್ರೀರಾಮ ಸೇನೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ದತ್ತಮಾಲಾ ಅಭಿಯಾನಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿತು. ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಶಂಕರಮಠದಿಂದ ಆರಂಭ ವಾದ ಶೋಭಾ ಯಾತ್ರೆ ಎಂಜಿ ರಸ್ತೆ ಮೂಲಕ ಆಜಾದ್ ಪಾರ್ಕ್‍ನಲ್ಲಿ ಅಂತ್ಯಗೊಂಡಿತು. ಶೋಭಾಯಾತ್ರೆಗೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಕೋಲಾರ, ಮಡಿಕೇರಿ ಇನ್ನಿತರ ಕಡೆಗಳಿಂದ ಶ್ರೀರಾಮ ಸೇನೆಯ ದತ್ತಮಾಲಾಧಾರಿಗಳು ಪಾಲ್ಗೊಂಡಿದ್ದರು. ಶೋಭಾ ಯಾತ್ರೆಯಲ್ಲಿ ದತ್ತ ವಿಗ್ರಹ ಇಟ್ಟು, ಪುಷ್ಪಾಲಂಕೃತ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ದತ್ತ ಮಾಲಾಧಾರಿಗಳಿಂದ ಜಯಕಾರದ ಘೋಷಣೆ ದಾರಿಯುದ್ದಕ್ಕೂ ಮೊಳಗಿದವು. […]

ಹರ್ ಘರ್ ತಿರಂಗಾ ಅಭಿಯಾನಕ್ಕೆ ಗೃಹ ಸಚಿವ ಜ್ಞಾನೇಂದ್ರ ಚಾಲನೆ

ಬೆಂಗಳೂರು, ಆ.4- ರಾಜ್ಯ ವಿಪತ್ತು ಸ್ಪಂದನಾ ಪಡೆ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಗೃಹ ಸಚಿವ ಆರಗಜ್ಞಾನೇಂದ್ರ ಚಾಲನೆ ನೀಡಿದರು. ವಿಧಾನಸೌಧದ ಮುಂಭಾಗ ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆ ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿ ರಾಷ್ಟ್ರ ಧ್ವಜವಿಡಿದು ಹೆಜ್ಜೆ ಹಾಕಿದರು. ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಗೃಹ ಸಚಿವರು, ಸಾವಿರಾರು ಜನರ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಈ ದೇಶದಲ್ಲಿ ಹುಟ್ಟಿದ […]