ಪ್ರತಿಭಟನೆ ವೇಳೆ ಸಂಘರ್ಷ, ಪೊಲೀಸರಿಂದ ಲಾಠಿ ಚಾರ್ಜ್

ಬೆಂಗಳೂರು,ಜ.31- ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರ ತೆಗೆಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಜ್ಞಾನಭಾರತಿ ಆವರಣದಲ್ಲಿಂದು ಪ್ರತಿಭಟನೆ ನಡೆಸುತ್ತಿದ್ದ ಸ್ನಾತಕೋತ್ತರ ವಿಭಾಗದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ ವೇಳೆ ಸಂಘರ್ಷ ಉಂಟಾಗುವ ಸಾಧ್ಯತೆ ಅರಿತ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿಪ್ರಹಾರ ಮಾಡಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪೊಲೀಸರ ವರ್ತನೆಯಿಂದ ವಿಚಲಿತರಾಗಿ ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಗಣರಾಜ್ಯೋತ್ಸವದಂದು ರಾಯಚೂರಿನಲ್ಲಿ ಧ್ವಜಾರೋಹಣದ ವೇಳೆ ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅವಮಾನ ಮಾಡಿದ್ದಾರೆ. ಈ […]