ನಿವಾಸಕ್ಕೆ ನುಗ್ಗಿ ಎಬಿವಿಪಿ ಕಾರ್ಯಕರ್ತರ ಆಕ್ರೋಶ, ಗೃಹ ಸಚಿವರು ಹೇಳಿದ್ದೇನು..?

ಶಿವಮೊಗ್ಗ,ಜು.30- ಎಸ್‍ಡಿಪಿಐ ನಂತಹ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕೆಂಬ ಬೇಡಿಕೆಯೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ. ಸರ್ಕಾರವೂ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಬೆಂಗಳೂರಿನ ತಮ್ಮ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ ಎಂದರು. […]