ಕಾಂಗ್ರೆಸ್ ಸೇರಲು ಮುಂದಾದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಬೆಂಗಳೂರು, ಜ.30- ನಟ, ನಿರ್ದೇಶಕ, ನಿರ್ಮಾಪಕ ಎಸ್.ನಾರಾಯಣ್ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಎಸ್.ನಾರಾಯಣ್ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಪಕ್ಷ ಸೇರುವ ಇಚ್ಚೆ ವ್ಯಕ್ತ ಪಡಿಸಿದ್ದಾರೆ. ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ಎಸ್.ನಾರಾಯಣ್ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಚೈತ್ರದ ಪ್ರೇಮಾಂಜಲಿ ನಿರ್ದೇಶನದ ಮೂಲಕ ಸ್ವತಂತ್ರ ವೃತ್ತಿ ಜೀವನ ಆರಂಭಿಸಿದ ಅವರು ವರನಟ ಡಾ.ರಾಜ್‍ಕುಮಾರ್ ಅವರ ಶಬ್ಧವೇದಿ, ಡಾ.ವಿಷ್ಣುವರ್ಧನ್ ಅವರ […]