ರಾಜಧಾನಿ ಮಾಫಿಯಾ ಗ್ರಾಮಾಂತರಕ್ಕೆ ಶಿಫ್ಟ್ : ಹೆಡೆಮುರಿ ಕಟ್ಟುವರೇ ಅಲೋಕ್..?

ನೆಲಮಂಗಲ,ಜ.19- ಸಿಲಿಕಾನ್ ಸಿಟಿ ಸೆರಗಿನಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಫಿಯಾ ರಾಜಧಾನಿಯಾಗಿ ಬದಲಾಗುತ್ತಿದೆಯೇ? ಹೌದು… ಈ ಭಾಗದಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳು, ಸ್ಕಿಲ್‍ಗೇಮ್‍ಗಳ ಹಾವಳಿ, ಇಸ್ಟಿಟ್ ಹಾಗೂ ಮಾಂಸದ ದಂಧೆಗಳು ಹಾಗೂ ರೌಡಿಸಂನಿಂದಾಗಿ ಇಂತಹ ಪರಿಸ್ಥಿತಿ ಬಂದೊದಗಿದೆ. ರಾಜಧಾನಿಗೆ ಹೊಂದಿಕೊಂಡಂತಿರುವ ಜಿಲ್ಲೆಯಲ್ಲಿ ಭೂಮಿ ಬೆಲೆಗೆ ಬೂಮ್ ಬಂದಿರುವುದರಿಂದ ರಿಯಲ್ ಎಸ್ಟೆಟ್ ಜತೆಗೆ ಮಟ್ಕಾ, ಜೂಜು, ಸ್ಕಿಲ್‍ಗೇಮ್‍ಗಳು, ಇಸ್ಟಿಟ್ ಅಡ್ಡೆಗಳು ಹಾಗೂ ಮಸಾಜ್ ಪಾರ್ಲರ್‍ಗಳು ಗ್ರಾಮಾಂತರ ಪ್ರದೇಶಗಳಿಗೆ ಶಿಫ್ಟ್ ಆಗಿವೆ. ಸಮಾಜದ ಕೊಳಕನ್ನು ತೊಳೆದು ಹಾಕಬೇಕಾದ ರಕ್ಷಕರೆ ಪರೋಕ್ಷವಾಗಿ […]
ಸ್ಯಾಂಟ್ರೋ ರವಿ ಬಂಧನಕ್ಕೆ 4 ವಿಶೇಷ ತಂಡ ರಚನೆ

ಮೈಸೂರು,ಜ.11- ಸ್ಯಾಂಟ್ರೊ ರವಿ ವಿರುದ್ಧ ರೇಪ್ ಕೇಸ್ ಮತ್ತು ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಆತನ ಬಂಧನಕ್ಕೆ ನಾಲ್ಕು ತಂಡ ರಚಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಟರ್ ನ್ಯಾಷನಲ್ ಇಮಿಗ್ರೆಷನ್ ಚೆಕ್ ಪೋಸ್ಟ್ ಲುಕ್ ಔಟ್ ನೋಟಿಸ್ ಸಕ್ಯೂಲರ್ ಕೂಡ ಕೊಟ್ಟಿದ್ದೇವೆ ಎಂದರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿಯಾಗಿರುವ ಆತನ ಪತ್ನಿ ವನಜಾಕ್ಷಿಯನ್ನು ವಿಚಾರಣೆಗೆ ಒಳಪಡಿಸಿ, ಸ್ಯಾಂಟ್ರೊ ರವಿಯ ಹಣಕಾಸು ವ್ಯವಹಾರ, ಬ್ಯಾಂಕ್ ಖಾತೆ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಸ್ಯಾಂಟ್ರೊ […]
ಪಿಎಸ್‍ಐ ನೇಮಕಾತಿ ಅಕ್ರಮ : ಅಮೃತ್‍ಪೌಲ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ

ಬೆಂಗಳೂರು, ಡಿ.3- ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಪೌಲ್ ವಿರುದ್ಧ ಸಿಐಡಿ ಪೊಲೀಸರು 1406 ಪುಟಗಳ ಹೆಚ್ಚುವರಿ ಚಾರ್ಜ್‍ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪೈಕಿ 38 ಸಾಕ್ಷಿದಾರರ ಹೇಳಿಕೆ, 78 ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದರು. ಅಮೆರಿಕಾಗೂ ಕಾಡುತ್ತಿದೆ ಚೀನಾದ ಟಿಕ್‍ಟಾಕ್ ಭಯ ಪಿಎಸ್‍ಐ […]
BIG NEWS : ನಿಮ್ಮ ಖುಷಿ ತುಂಬಾ ದಿನ ಇರಲ್ಲ : ADGP ಅಲೋಕ್ ಕುಮಾರ್‌ಗೆ ಜೀವ ಬೆದರಿಕೆ

ಬೆಂಗಳೂರು,ನ.24-ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ತಿರುವು ದೊರೆತಿದ್ದು, ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಘಟನೆಯ ಹೊಣೆ ಹೊತ್ತುಕೊಂಡಿದೆ. ಜತೆಗೆ ಎಡಿಜಿಪಿ ಅಲೋಕ್‍ಕುಮಾರ್‍ಗೂ ಬೆದರಿಕೆ ಹಾಕಲಾಗಿದೆ. ಅನಾಮದೇಯ ಮೂಲಗಳಿಂದ ಬಂದಿರುವ ಪತ್ರಿಕಾ ಹೇಳಿಕೆಯ ತಲೆಬರಹ ಅರೆಬಿಕ್ ಭಾಷೆಯಲ್ಲಿದೆ. ಮಜಿಲ್ ಅಲ್ ಮುಕ್ವಾವಹಮ್ಮದ್ ಅಲ್-ಇಸ್ಲಾಮಿಯಾ ಎಂದು ಬರೆಯಲಾಗಿದ್ದು, ಕೆಳಗೆ ಶಂಕಿತ ಉಗ್ರ ಶಾರಿಕ್‍ನ ಎರಡು ಫೋಟೋಗಳನ್ನು ಪ್ರಕಟಿಸಲಾಗಿದೆ. ಒಂದು ಫೋಟೋ ಆತ ಸೋಟಕ್ಕೂ ಮುನ್ನ ಸ್ಟೈಲೀಶ್‍ಆಗಿ ಫೋಸ್‍ಕೊಟ್ಟಿರುವುದು, ಮತ್ತೊಂದು ಸ್ಪೋಟದ ಬಳಿಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ. […]
ದುಷ್ಕರ್ಮಿಗಳ ಹಿನ್ನೆಲೆ ಕುರಿತು ತನಿಖೆ : ಅಲೋಕ್ ಕುಮಾರ್
ಶಿವಮೊಗ್ಗ, ಆ.16- ಯುವಕನಿಗೆ ಚಾಕು ಇರಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿದ್ದು, ಈ ಪೈಕಿ ಮೂವರನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನ್ ನಿರ್ದೇಶಕರಾದ ಅಲೋಕ್ ಕುಮಾರ್ ತಿಳಿಸಿದರು. ಜಿಲ್ಲೆಯಲ್ಲಿ ನಡೆದ ಘಟನೆ ಸಂಬಂಧ ರಾತ್ರಿಯೇ ಅಲೋಕ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ ಅವರ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿರುವುದು […]
ಪ್ರವೀಣ್ ನೆಟ್ಟಾರು ಕೊಲೆಯಲ್ಲಿ PFI-ADPI ಕೈವಾಡ ಶಂಕೆ : ಅಲೋಕ್ ಕುಮಾರ್
ಮಂಗಳೂರು,ಆ.11- ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ತಲಪಾಡಿ ಚೆಕ್‍ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಮೂವರು ಆರೋಪಿಗಳಿಗೆ ಆಶ್ರಯ ನೀಡಿದ ಮೂವರು ಮಹಿಳೆಯರು ಸೇರಿ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದರು. ಹಂತಕರು ಎಂದು ಗೊತ್ತಿದ್ದರೂ ಅವರಿಗೆ ಆಶ್ರಯ, ಹಣ, ಊಟ ಸಹಾಯ […]
ಎಡಿಜಿಪಿ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ
ಮಂಗಳೂರು, ಆ.4- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಸರಣಿ ಕೊಲೆಗಳು ನಡೆದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ಕುಮಾರ್ ಅವರು ಇಂದು ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಉದ್ವಿಗ್ನ ಸ್ಥಿತಿಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ಮರಳುತ್ತಿದ್ದು, ಪರಿಸ್ಥಿತಿ ಅವಲೋಕಿ ಸಲು ಇಂದು ಎಡಿಜಿಪಿ ಅವರು ಸಭೆ ನಡೆಸಿದರು. ಇತ್ತೀಚೆಗೆ ನಡೆದ ಘಟನೆಗಳ ಬಗ್ಗೆ ಅವಲೋಕನ ಮಾಡಲಾಯಿತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮುಂದೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ […]
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈವರೆಗೆ 15 ಜನ ವಶಕ್ಕೆ, ತನಿಖೆ ಚುರುಕು
ಬೆಂಗಳೂರು,ಜು.28- ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೂ ಹದಿನೈದಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಹೇಳಿದರು. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳ್ಳಾರೆಯಲ್ಲಿರುವ ಎಡಿಜಿಪಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಉಡುಪಿ ಪೊಲೀಸರ ಉಸ್ತುವಾರಿಯಲ್ಲಿ ಪ್ರವೀಣ್ ಹತ್ಯೆ ಸಂಬಂಧ ರಚಿಸಲಾಗಿರುವ ಆರು ಪೊಲೀಸ್ ತಂಡಗಳು ಈಗಾಗಲೇ ಕಾರ್ಯೋನ್ಮುಖವಾಗಿ ತನಿಖೆ ನಡೆಸುತ್ತಿವೆ ಎಂದರು. ಆರೋಪಿಗಳ ಪತ್ತೆಗೆ […]
ವಿಚಾರಣೆ ಮುಂದೂಡಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ
ನವದೆಹಲಿ,ಜು.12- ಬೆಂಗಳೂರು ನಗರ ಜಿಲ್ಲಾಧಿಕಾರಿ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು, ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಡಿಜಿಪಿ ವಿರುದ್ಧ ನಡೆಸುತ್ತಿರುವ ವಿಚಾರಣೆಯನ್ನು 3 ದಿನಗಳ ಕಾಲ ಮುಂದೂಡುವಂತೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‍ಗೆ ಸೂಚನೆ ನೀಡಿದೆ. ಎಸಿಬಿಯ ಎಡಿಜಿಪಿ ಸೀಮಂತ್‍ಕುಮಾರ್ ಸಿಂಗ್ ವಿರುದ್ಧ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಚ್.ಪಿ.ಸಂದೇಶ ಅವರು ವ್ಯಕ್ತಪಡಿಸಿದ್ದ ಮೌಖಿಕ ಅಭಿಪ್ರಾಯಗಳು ಹಾಗೂ ಲಿಖಿತ ಆದೇಶಗಳ ಕುರಿತು ಸುಪ್ರಿಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ್ದ […]