ಆದಿಚುಂಚನಗಿರಿ ಮಠದಲ್ಲಿ ನಡೆದ ಗುರುಪೌರ್ಣಿಮೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು

ಆದಿಚುಂಚನಗಿರಿ: ನಾಡಿಗೆ ಗುರು ಸ್ಥಾನದಲ್ಲಿ ಇದ್ದು ಮಾರ್ಗದರ್ಶನ ಮಾಡುತ್ತಿರುವ ಆದಿಚುಂಚನಗಿರಿ ಮಠವು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಉಂಟುಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಶ್ರೀಮಠದಲ್ಲಿ ಬುಧವಾರ ಏರ್ಪಡಿಸಿದ್ದ ಗುರುಪೌರ್ಣಿಮೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದಲ್ಲಿ ಗುರುಗಳಿಗೆ ಅತ್ಯಂತ ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ಶ್ರೀಸಾಮಾನ್ಯರು ಮತ್ತು ಭಕ್ತಾದಿಗಳ ಬದುಕನ್ನು ಹಸನಾಗಿಸುವ ಅವರ ಚೈತನ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ನುಡಿದರು. ಮಠದ ಗುರು ಪರಂಪರೆಯು […]