ಅಸ್ಸಾಂ ವಿಧಾನಸಭೆಯಲ್ಲಿ ಎನ್‍ಕೌಂಟರ್ ಗಲಾಟೆ

ಗುವಾಹಟಿ,ಡಿ.24- ಅಸ್ಸಾಂನಲ್ಲಿ ನಡೆದ ಎನ್‍ಕೌಂಟರ್‍ಗಳ ಕುರಿತು ಸದನದಲ್ಲಿ ಕಾವೇರಿದ ಚರ್ಚೆಯಾಗಿ, ವಿಧಾನಸಭೆ ಕಲಾಪವನ್ನು ಒಂದು ಗಂಟೆಗಳ ಕಾಲ ಮುಂದೂಡಬೇಕಾದ ವಾತಾವರಣ ನಿರ್ಮಾಣವಾಯಿತು. ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪಿಜೂಶ್ ಹಜಾರಿಕಾ ಪ್ರತಿಪಕ್ಷಗಳ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಯಾವುದೇ ಎನ್‍ಕೌಂಟರ್ ನಡೆದಿಲ್ಲ. ಆದರೆ ಶಂಕಿತ ಅಪರಾಧಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಕೆಲವರ ಗಾಯಗೊಂಡಿದ್ದಾರೆ ಎಂದು ಹೇಳಿದರು. ಈ ಹೇಳಿಕೆಯನ್ನು ಒಪ್ಪದ ಪಕ್ಷೇತರ ಶಾಸಕ […]

ಶಾಸಕರಿಗೆ ಏಕವಚನದಲ್ಲಿ ನಿಂದನೆ : ಸದನದಲ್ಲಿ ಗದ್ದಲ- ಕೋಲಾಹಲ

ಬೆಳಗಾವಿ,ಡಿ.21- ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಶಾಸಕರೊಬ್ಬರನ್ನು ಸಚಿವರಿಬ್ಬರು ಏಕವಚನದಲ್ಲಿ ಗದರಿಸಿದ ಪರಿಣಾಮ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ, ಗದ್ದಲ, ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಿದ ಪ್ರಸಂಗ ಜರುಗಿತು. ಸಭಾಧ್ಯಕ್ಷರ ಸ್ಥಾನದಲ್ಲಿದ್ದ ಕುಮಾರ ಬಂಗಾರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಗೋವಿಂದ ಕಾರಜೋಳ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರ ಜೊತೆ ನಡೆಸಿದ ಸಂಧಾನ ವಿಫಲವಾಗಿದ್ದರಿಂದ ಅನಿವಾರ್ಯವಾಗಿ ಸದನವನ್ನು ಮುಂದೂಡಲಾಯಿತು. ಸದಸ್ಯರ ವಿರುದ್ಧ ಲಘುವಾಗಿ ಮಾತನಾಡಿರುವ ಸಚಿವ ಗೋವಿಂದ ಕಾರಜೋಳ ಅವರು ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ […]

ಗ್ಯಾನವಾಪಿ ಮಸೀದಿ ಪ್ರಕರಣ ವಿಚಾರಣೆ ನ.14ಕ್ಕೆ ಮುಂದೂಡಿಕೆ

ವಾರಣಾಸಿ, ನ.8- ಉತ್ತರ ಪ್ರದೇಶದ ವಾರಾಣಾಸಿ ಫಾಸ್ಟ್ ಟ್ರಾಕ್ ಕೋರ್ಟ್ ಗ್ಯಾನವಾಪಿ ಮಸೀದಿಯ ಪ್ರಕರಣದ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ. ದೇಶದ ಗಮನ ಸೆಳೆದಿರುವ ಗ್ಯಾನವಾಪಿ ಮಸೀದಿ ಪ್ರಕರಣದಲ್ಲಿ ಅರ್ಜಿದಾರರು ಮೂರು ಬೇಡಿಕೆಗಳನ್ನು ಮುಂದಿಟ್ಟು ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಲ್ಲಿ ಮೊದಲನೆಯದು ಮಸೀದಿಯಲ್ಲಿರುವ ಸ್ವಯಂಭು ಜ್ಯೋರ್ತಿಲಿಂಗ ಭಗವಾನ್ ವಿಶ್ವೇಶ್ವರನಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು. ಒಟ್ಟಾರೆ ಮಸೀದಿಯನ್ನು ಹಿಂದುಗಳ ವಶಕ್ಕೆ ನೀಡಬೇಕು, ಮುಸ್ಲಿಂಮರಿಗೆ ಮಸೀದಿ ಪ್ರವೇಶವನ್ನು ನಿರ್ಬಂಧಿಸಬೇಕು ಎಂಬುದು ಬೇಡಿಕೆಳಾಗಿವೆ. ಸಿದ್ದರಾಮಯ್ಯನವರೇ ನಿಮ್ಮ ಕ್ಷೇತ್ರ ಅಂತಿಮಗೊಳಿಸಿ : ಸಿಎಂ […]

ಬಿಎಂಎಸ್ ಟ್ರಸ್ಟ್ ಅಕ್ರಮ ತನಿಖೆಗೆ ಬಿಗಿಪಟ್ಟು: ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು, ಸೆ.23- ಬಿಎಂಎಸ್ ಟ್ರಸ್ಟ್‍ನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣವನ್ನು ತನಿಖೆಗೆ ವಹಿಸಬೇಕೆಂದು ಜೆಡಿಎಸ್ ಪಟ್ಟು ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಇಂದು ಯಾವುದೇ ಕಾರ್ಯ-ಕಲಾಪ ನಡೆಯದೆ ಮಳೆಗಾಲದ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಒಂದು ಕಡೆ ಜೆಡಿಎಸ್ ವಿಧಾನಸಭೆಯ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗಿಳಿದರೆ ಮತ್ತೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ 40% ಕಮಿಷನ್ ಭ್ರಷ್ಟಾಚಾರವನ್ನು ತನಿಖೆಗೆ ವಹಿಸಬೇಕೆಂದು ಆಗ್ರಹಿಸಿತು. ಈ ನಡುವೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ, ಆರೋಪ, ಪ್ರತ್ಯಾರೋಪ ನಡೆಯಿತು. ಆ ಸಂದರ್ಭದಲ್ಲಿ […]

ಆಡಳಿತ -ಪ್ರತಿಪಕ್ಷಗಳ ರಾಜಕೀಯ ಮೇಲಾಟಕ್ಕೆ ಅಧಿವೇಶನದ ಸಮಯ ವ್ಯರ್ಥ

ನವದೆಹಲಿ, ಜು.28- ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸುತ್ತಿರುವುದು ಸೇರಿದಂತೆ ಹಲವು ಗಂಭೀರ ವಿಷಯಗಳು ಇಂದು ಕೂಡ ಚರ್ಚೆಯಾಗದೆ ಸಂಸತ್ ಕಲಾಪ ಪದೇ ಪದೇ ಮುಂದೂಡಿಕೆಯಾಗಿದೆ. ಜುಲೈ 18ರಿಂದ ಆರಂಭವಾದ ಸಂಸತ್‍ನ ಉಭಯ ಸದನಗಳ ಕಲಾಪದಲ್ಲಿ ಈವರೆಗೂ ಸುಗಮ ಕಲಾಪ ನಡೆದೆ ಇಲ್ಲ. ಪ್ರತಿಪಕ್ಷಗಳಾದ ಕಾಂಗ್ರೆಸ್, ಸಿಪಿಎಂ, ಟಿಎಂಸಿ, ಟಿಎಸ್‍ಆರ್, ಡಿಎಂಕೆ ಸೇರಿದಂತೆ ಹಲವು ಪಕ್ಷಗಳು ಸಂಸತ್‍ನಲ್ಲಿ ಹಣದುಬ್ಬರ, ಮೊಸರು ಹಾಗೂ ಇತರ ದಿನ ಬಳಕೆಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವುದು, ಸೇನೆಗೆ ಅಗ್ನಿಪಥ್ […]

7 ದಿನಗಳಿಂದ ಪದೇ ಪದೇ ಮುಂದೂಡಿಕೆಯಾಗುತ್ತಲೇ ಇದೆ ಸಂಸತ್ ಅಧಿವೇಶನ

ನವದೆಹಲಿ, ಜು.27- ಕಳೆದ ಏಳು ದಿನಗಳಿಂದ ಆರಂಭವಾಗಿರುವ ಸಂಸತ್ ಅಧಿವೇಶನ ಯಾವುದೇ ಫಲಪ್ರದ ಚರ್ಚೆಯಾಗದೆ ಪದೇ ಪದೇ ಮುಂದೂಡಿಕೆಯಾಗುತ್ತಿದ್ದು, ಇಂದು ಕೂಡ ಮಧ್ಯಾಹ್ನದವರೆಗೂ ಯಾವುದೇ ಕಲಾಪ ನಡೆಯದೆ ಸಮಯ ವ್ಯರ್ಥವಾಗಿದೆ. ಜುಲೈ 18 ರಿಂದ ಆರಂಭವಾಗಿರುವ ಕಲಾಪದಲ್ಲಿ ಈವರೆಗೂ 19 ಮಂದಿ ರಾಜ್ಯಸಭೆ ಸದಸ್ಯರು, ನಾಲ್ವರು ಲೋಕಸಭೆ ಸಂಸದರನ್ನು ಅಮಾನತುಗೊಳಿಸಲಾಗಿದೆ. ಬೆಲೆ ಏರಿಕೆ ಮತ್ತು ಆಹಾರ ಪದಾರ್ಥಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದಿದ್ದು, ಗದ್ದಲ-ಕೋಲಾಹಲ ನಿರ್ಮಿಸಿವೆ. ಇದಕ್ಕಾಗಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ […]

ಮೇಕೆದಾಟು ಯೋಜನೆ, ಆ.10ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ,ಜು.26- ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.ವಿಸ್ತೃತ ಯೋಜನಾ ವರದಿ(ಡಿಪಿಆರ್) ಕುರಿತಾಗಿ ಕಾವೇರಿ ಜಲ ನಿರ್ವಹಣಾ ಪ್ರಾಕಾರದಲ್ಲಿ ಯಾವುದೇ ರೀತಿಯ ಚರ್ಚೆ ನಡೆಸಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತು. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಸಿದಂತೆ ಕರ್ನಾಟಕ ಸರ್ಕಾರದ ಡಿಪಿಆರ್ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸದಂತೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಮನ್ನಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು. […]

ಇಂದೂ ನಡೆಯದ ಕಲಾಪ: ಪದೇ ಪದೆ ಅಧಿವೇಶನ ಮುಂದೂಡಿಕೆ

ನವದೆಹಲಿ,ಜು.22-ದೈನಂದಿನ ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಸಂಸತ್‍ನಲ್ಲಿ ಗದ್ದಲ ಎಬ್ಬಿಸಿದ್ದರಿಂದ ಪದೇ ಪದೆ ಕಲಾಪ ಮುಂದೂಡಿಕೆಯಾಯಿತು. ಲೋಕಸಭೆಯಲ್ಲಿ ಪ್ರತಿಪಕ್ಷಗಳು ತೆರಿಗೆ ಏರಿಕೆ ಮತ್ತು ಹಣದುಬ್ಬರ ಹೆಚ್ಚಳ ವಿರೋಧಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರಿಂದಾಗಿ ಮಧ್ಯಾಹ್ನ 12 ಗಂಟೆಗೆ ಒಮ್ಮೆ ಕಲಾಪವನ್ನು ಮುಂದೂಡಲಾಯಿತು. ಮತ್ತೆ ಸದನ ಸಮಾವೇಶಗೊಂಡಾಗಲೂ ಗದ್ದಲ ಮುಂದುವರೆದಿದ್ದರಿಂದ ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಲಾಗಿದೆ. ಇತ್ತ ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳ ಪ್ರತಿರೋಧ ತೀವ್ರವಾಗಿದ್ದು, ಬೆಲೆ ಏರಿಕೆ ಮತ್ತು ಜಿಎಸ್‍ಟಿ ವಿಧಿಸಿರುವುದರ ವಿರುದ್ಧ ಚರ್ಚೆಗೆ […]

3ನೇ ದಿನವೂ ಪ್ರತಿಪಕ್ಷಗಳು ಗದ್ದಲ, ಸಂಸತ್‍ ಕಲಾಪ ಮುಂದೂಡಿಕೆ

ನವದೆಹಲಿ,ಜು.20- ಜಿಎಸ್‍ಟಿ ಏರಿಕೆ, ಹಣದುಬ್ಬರ, ಅಗ್ನಿಪಥ್ ಯೋಜನೆ ವಿರೋಸಿ ಮೂರನೆ ದಿನವೂ ಪ್ರತಿಪಕ್ಷಗಳು ಗದ್ದಲ, ಕೋಲಾಹಲ, ಪ್ರತಿಭಟನೆ ವ್ಯಕ್ತಪಡಿಸಿದ್ದರಿಂದ ಸಂಸತ್‍ನ ಉಭಯ ಸದನಗಳ ಕಲಾಪ ಮಧ್ಯಾಹ್ನದವರೆಗೂ ಮುಂದೂಡಿಕೆಯಾಗಿದೆ. ಸೋಮವಾರದಿಂದ ಆರಂಭಗೊಂಡ ಸಂಸತ್ ಅಧಿವೇಶನದಲ್ಲಿ ಯಾವುದೇ ಫಲಪ್ರದ ಚರ್ಚೆಯಾಗದೆ ಸಮಯ ವ್ಯರ್ಥವಾಗುತ್ತಿದೆ. ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಪ್ರತಿಭಟನೆಗಿಳಿದಿವೆ. ಸಂಸತ್‍ನ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಪ್ರತಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿವೆ. ಸಂಸತ್ ಒಳಗೆ ಕಾಂಗ್ರೆಸ್, ಡಿಎಂಕೆ, ಎಎಪಿ, […]