ಜನವರಿ ಮೊದಲ ವಾರದಲ್ಲಿ ಕೆಪಿಟಿಸಿಎಲ್ ಎಇಇ,ಜೆಇ ನೇಮಕಾತಿ ಪರೀಕ್ಷೆ ಫಲಿತಾಂಶ

ಬೆಳಗಾವಿ ಸುವರ್ಣಸೌಧ,ಡಿ.20: ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದ್ದು,ಫಲಿತಾಂಶ ಪ್ರಕಟಿಸಲಾಗಿರುವುದಿಲ್ಲ;ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ […]