ಏರೋ ಇಂಡಿಯಾ 2023ಗೆ ಚಾಲನೆ, ಇಲ್ಲಿದೆ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್

ಬೆಂಗಳೂರು,ಫೆ.13- ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿಲ್ಲಿ ತಿಳಿಸಿದರು.ಹೊಸ ಭಾರತ ಈಗ ನಮ್ಮ ಕಣ್ಮುಂದೆ ಕಾಣುತ್ತಿದೆ. ಇದಕ್ಕೆ ರಕ್ಷಣಾ ಕ್ಷೇತ್ರದಲ್ಲಿ ಹಾಗು ತಂತ್ರಜ್ಞಾನ ಕ್ಷೇತ್ರದಲ್ಲಿ ನಾವು ಸಾಧಿಸಿರುವ ಪ್ರಗತಿಯೇ ಕಾರಣ ಎಂದು ಬಣ್ಣಿಸಿದರು. ಯಲಹಂಕ ವಾಯುನೆಲೆಯಲ್ಲಿ ಆರಂಭಗೊಂಡ 14ನೇ ಆವೃತ್ತಿಯ ಏರೋ ಇಂಡಿಯಾ ಶೋ ಉದ್ಘಾಟಿಸಿ ಮಾತನಾಡಿದ ಅವರು, ನವಭಾರತದ ಸಾಮಥ್ರ್ಯಕ್ಕೆ ಬೆಂಗಳೂರಿನ ಆಗಸ ಸಾಕ್ಷಿಯಾಗುತ್ತಿದೆ. ಹೊಸ ಎತ್ತರವೇ ನವಭಾರತದ ಸತ್ಯ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಇಂದು ರಾಷ್ಟ್ರವು […]